ಕ್ರೈಂ ಸುದ್ದಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ಬೆಂಗಳೂರು:  ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ನಗರದ ರಾಜರಾಜೇಶ್ವರಿ ನಗರದಲ್ಲಿರುವ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಕಾರು ನಿಲ್ಲಿಸಿ ಮನೆಯೋಳಗೆ ಹೋಗುವ ಸಮಯಕ್ಕೆ ಸರಿಯಾಗಿ ಬಂದೂಕಿನಿಂದ ಗುಂಡು ಹಾರಿದ್ದು ಮನೆಯ ಬಾಗಿಲಿನಲ್ಲಿಯೇ ಮೃತ ಪಟ್ಟಿದ್ದಾರೆ.

ಗೌರಿ ಲಂಕೇಶ್ ಅವರು ಮನೆಯ ಹೊರಗೆ ನಿಂತ ವೇಳೆ ಎದೆ ಹಾಗೂ ಹೃದಯ ಭಾಗಕ್ಕೆ ಗುಂಡು  ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ದೌಡಾಯಿಸಿದ್ದು, ಗೌರಿ ಲಂಕೇಶ್ ಅವರು ಮನೆಯ ಹೊರಗೆ ನಿಂತ ವೇಳೆ ಎದೆ ಹಾಗೂ ಹೃದಯ ಭಾಗಕ್ಕೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಡಿಸಿಪಿ ಅನುಚೇತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment