ರಾಜಕೀಯ

ಹೆಚ್ಚು ಸೀಟ್ ಗಾಗಿ ಕಾಂಗ್ರೆಸ್ ಬಳಿ ಭಿಕ್ಷೆ ಬೇಡಲ್ಲ: ಮಾಯಾವತಿ

ಲಖನೌ: ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೀಟುಗಳಿಗಾಗಿ ಕಾಂಗ್ರೆಸ್ ಬಳಿ ಭಿಕ್ಷೆ ಬೇಡುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸೀಟುಗಳಿಗಾಗಿ ಅವರ ಬಳಿ ಭಿಕ್ಷೆ ಬೇಡುವುದಿಲ್ಲ. ಬಿಎಸ್’ಪಿ ಪಕ್ಷ ಗೌರವಾನ್ವಿತ ಸಂಖ್ಯೆಯಷ್ಟು ಸೀಟುಗಳನ್ನು ಮಾತ್ರ ಕೇಳಿತ್ತು. ಆದರೆ, ಅವರಿಂದ ಈವರೆಗೂ ಸೀಟು ಹಂಚಿಕೆ ಬಗ್ಗೆ ಸರಿಯಾದ ಉತ್ತರಗಳು ಬಂದಿಲ್ಲ. ನಮ್ಮ ಪಕ್ಷ ಸ್ವತಂತ್ರವಾಗಿಯೇ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ಕೂಡ ಕಿಡಿಕಾರಿರುವ ಅವರು, ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳೂ ಬಿಎಸ್’ಪಿ ಪಕ್ಷವನ್ನು ದುರ್ಬಲಗೊಳಿಸಲು ಯತ್ನ ನಡೆಸುತ್ತಿವೆ ಎಂದು ಹೇಳಿದ್ದಾರೆ. ಛತ್ತೀಸ್ಗಢ ಚುನಾವಣೆಯಲ್ಲಿ ಅಜಿತ್ ಜೋಗಿ ಅವರ ಜೆಸಿಸಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಮಾಯಾವತಿಯವರು, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆಂದು ಹೇಳಿದ್ದರು.

About the author

ಕನ್ನಡ ಟುಡೆ

Leave a Comment