ರಾಜಕೀಯ

ಹೈ.ಕರ್ನಾಟಕದ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್‌ ‘ಕೈ’ಗೆ ರಾಜೀನಾಮೆ

ಬೆಂಗಳೂರು: ಹೈದರಾಬಾದ್‌ ಕರ್ನಾಟಕದ ಪ್ರಭಾವಿ ಕಾಂಗ್ರೆಸ್‌ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಕೊನೆಗೂ ಕಾಂಗ್ರೆಸ್‌ ಪಕ್ಷ  ತೊರೆದಿದ್ದು, ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

6 ಬಾರಿ ಶಾಸಕರಾಗಿ ಆಯ್ಕೆಯಾದರೂ ಸಚಿವ ಸ್ಥಾನ ಸಿಗದೆ ಇದ್ದುರಿಂದ ಪಕ್ಷದ ವಿರುದ್ಧ ತೀವ್ರ ಅಸಮಧಾನ ಹೊಂದಿದ್ದ  ಗುತ್ತೇದಾರ್‌ ಕಾಂಗ್ರೆಸ್‌ನ ಪ್ರಾಥಮಿಕ  ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್‌ ಕೆ.ಬಿ.ಕೋಳಿವಾಡ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡಿದ್ದಾರೆ. ಈಡಿಗ ಸಮುದಾಯಕ್ಕೆ ಸೇರಿರುವ ಗುತ್ತೇದಾರ್‌ ಅವರು ಹೈದರಾಬಾದ್‌ ಕರ್ನಾಟಕದಲ್ಲಿ ತನ್ನದೇ ಆದ ಬೆಂಬಲಿಗರನ್ನು ಹೊಂದಿದ್ದಾರೆ. ಗುತ್ತೇದಾರ್‌ ಅವರು ಬಿಜೆಪಿ ಮತ್ತು ಜೆಡಿಎಸ್‌ ನಾಯಕರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ.

 

 

About the author

ಕನ್ನಡ ಟುಡೆ

Leave a Comment