ರಾಷ್ಟ್ರ ಸುದ್ದಿ

ಹೊಸ ವರ್ಷಕ್ಕೆ ಹೊಸ ಸುದ್ದಿ ಕೊಟ್ಟ ನಟ ಪ್ರಕಾಶ್ ರೈ

ಚೆನ್ನೈ: ಸದಾ ವಿವಾದಾತ್ಮಕ ಹೇಳಿಕೆಗಳು, ಪ್ರಚಲಿತ ಸಮಸ್ಯೆಗಳ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಟೀಕಿಸಿ ಸುದ್ದಿಗೆ ಗ್ರಾಸವಾಗುತ್ತಿದ್ದ ದಕ್ಷಿಣ ಭಾರತದ ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಹೊಸವರ್ಷ 2019ಕ್ಕೆ ಅಚ್ಚರಿಯ ಸುದ್ದಿ ನೀಡಿದ್ದಾರೆ.ಇಂದು ಹೊಸ ವರ್ಷ 2019ಕ್ಕೆ ಶುಭ ಕೋರಿರುವ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಟ್ವಿಟ್ಟರ್ ಮೂಲಕ ಘೋಷಿಸಿಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಯುತ್ತಿದ್ದು ಯಾವ ಕ್ಷೇತ್ರದಿಂದ ಎಂದು ಸದ್ಯದಲ್ಲಿಯೇ ವಿವರ ನೀಡುವೆ ಎಂದು ತಿಳಿಸಿದ್ದಾರೆ. ಹೊಸ ವರ್ಷಕ್ಕೆ ಹೊಸ ಪ್ರಾರಂಭವನ್ನು ಆರಂಭಿಸುತ್ತಿದ್ದೇನೆ. ನನ್ನ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ನಿಮ್ಮ ಬೆಂಬಲದೊಂದಿಗೆ ಲೋಕಸಭೆಗೆ ಸ್ವರ್ಧಿಸುತ್ತಿದ್ದೇನೆ. ಆ ಮೂಲಕ ಸಂಸತ್ತಿಗೆ ಆಯ್ಕೆಯಾದರೆ ಜನರ ಪರ ಧ್ವನಿಯೆತ್ತುವುದಾಗಿ  ಹೇಳಿಕೊಂಡಿದ್ದಾರೆ.

About the author

ಕನ್ನಡ ಟುಡೆ

Leave a Comment