ರಾಜ್ಯ ಸುದ್ದಿ

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು  ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ   ಬಿಡುಗಡೆ ಮಾಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019 ಫೆಬ್ರವರಿ 7 ರಿಂದ 14ರವರೆಗೆ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ  ವಿವಿಧ ಭಾಷೆಗಳ 2 ಸಾವಿರಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ. 7 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.ನಗರದ ಒರಾಯನ್ ಮಾಲ್ ನ 11 ಪರದೆಗಳಲ್ಲಿ ಚಿತ್ರಗಳು ಪ್ರದರ್ಶನಗಳ್ಳಲಿದ್ದು,  ಚಲನಚಿತ್ರೋತ್ಸವ ಸಂಘಟನಾ  ಸಮಿತಿಯು ಚಲನಚಿತ್ರೋತ್ಸವದಲ್ಲಿ ಗುಣಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡುವ ಹಾಗೂ ವೆಚ್ಚ ಕಡಿಮೆಗೊಳಿಸುವ ಉದ್ದೇಶ ಹೊಂದಿದೆ ಎಂದರು.

ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್  ಮಾತನಾಡಿ, ನಿರ್ಧಿಷ್ಟ ವೇಳಾಪಟ್ಟಿ ಹೊಂದುವುದರಿಂದ ಸಿನಿಮಾ ಆಸಕ್ತರು ಭಾಗವಹಿಸುವುದಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು. ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About the author

ಕನ್ನಡ ಟುಡೆ

Leave a Comment