ಕ್ರೀಡೆ

181ಕ್ಕೆ ಆಲೌಟ್ ಆದ ವೆಸ್ಟ್ ಇಂಡೀಸ್

ರಾಜ್ ಕೋಟ್: ಸ್ಪಿನ್ನರ್ ಆರ್.ಅಶ್ವಿನ್ ಅವರ ಮಾಂತ್ರಿಕ ಬೌಲಿಂಗ್ ಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ, ಭಾರತದ ವಿರುದ್ಧ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂದ್ಯದ 3ನೇ ದಿನವಾದ ಶನಿವಾರ 181 ರನ್ ಗಳಿಗೆ ಆಲೌಟ್ ಆಗಿ ಫಾಲೊ-ಆನ್ ಗೆ ಒಳಗಾಗಿದೆ.ವೆಸ್ಟ್ ಇಂಡೀಸ್ ತಂಡವು ಭಾರತದ ವಿರುದ್ಧ 468 ರನ್ ಗಳ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ನಿನ್ನೆ ಮೊದಲ ಇನ್ನಿಂಗ್ಸ್ ಆಟ ಮುಗಿಸಿದ್ದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 649 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು.ಫಾಲೊ-ಆನ್ ಗೆ ಒಳಗಾಗಿ ಎರಡನೇ ಇನ್ನಿಂಗ್ಸ್ ಬ್ಯಾಟ್ ಮಾಡುತ್ತಿರುವ ವೆಸ್ಟ್ ಇಂಡೀಸ್ ಮಧ್ಯಾಹ್ನದ ವೇಳೆಗೆ 3 ವಿಕೆಟ್ ಕಳೆದುಕೊಂದು 97 ರನ್ ಗಳಿಸಿತ್ತು.

About the author

ಕನ್ನಡ ಟುಡೆ

Leave a Comment