ಕ್ರೀಡೆ

2ನೇ ಏಕದಿನ: ಟೀಂ ಇಂಡಿಯಾಗೆ ರೋಚಕ ಜಯ

ನಾಗಪುರ್: ಪ್ರವಾಸಿ ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್‌ಗಳಿಂದ ರೋಚಕ ಜಯ ಗಳಿಸಿದೆ. ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 250 ರನ್ ಗಳಿಗೆ ಆಲೌಟ್ ಆಗಿತ್ತು. 251 ರನ್ ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಗೆ ಗೆಲುವು ಸುಲಭವಾಗಿತ್ತು. ಆದರೆ ಟೀಂ ಇಂಡಿಯಾ ಬೌಲರ್ ಗಳ ನಿರ್ದಿಷ್ಠ ಬೌಲಿಂಗ್ ದಾಳಿಯಿಂದ 242 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಕೇವಲ 8 ರನ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೈದರಾಬಾದ್ ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.

About the author

ಕನ್ನಡ ಟುಡೆ

Leave a Comment