ರಾಷ್ಟ್ರ ಸುದ್ದಿ

2019ರಲ್ಲಿ ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

ಮುಂಬೈ: 2019ರ ಲೋಕಸಭೆ ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ. ಇಂದು ರಿಪಬ್ಲಿಕ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರತಿಪಕ್ಷಗಳ ಮಹಾಮೈತ್ರಿ ಕೇವಲ ಭ್ರಮೆ. ಅದು ಅಸ್ಥಿತ್ವಕ್ಕೆ ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಮಿತ್ರ ಪಕ್ಷ ಶಿವಸೇನೆ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯೊಂದಿಗೆ ಇರಲಿದೆ. ಈ ಸಂಬಂಧ ಅವರೊಂದಿಗೆ ಮಾತುಕತೆ ನಡೆದಿದೆ ಎಂದು ಶಾ ತಿಳಿಸಿದರು.
ಪಶ್ಚಿಮ ಬಂಗಾಳ, ಈಶಾನ್ಯದಲ್ಲಿ ಮತ್ತು ಒಡಿಶಾದಲ್ಲೂ ಈ ಬಾರಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಳೆದ ಐದು ವರ್ಷಗಳಲ್ಲಿ ನಾವು ರಾಷ್ಟ್ರೀಯ ಭದ್ರತೆ ಖಚಿತಪಡಿಸಿದ್ದೇವೆ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಿದ್ದೇವೆ ಎಂದರು.

About the author

ಕನ್ನಡ ಟುಡೆ

Leave a Comment