ರಾಷ್ಟ್ರ ಸುದ್ದಿ

2019 ಲೋಕಸಭಾ ಚುನಾವಣೆ: ಬಿಹಾರದ 17 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ತಲಾ  17 ಕ್ಷೇತ್ರಗಳಲ್ಲಿ ಬಿಜೆಪಿ,  ಜೆಡಿಯು  ಹಾಗೂ 6 ಕ್ಷೇತ್ರಗಳಲ್ಲಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ನೇತೃತ್ವದ ಎಲ್ ಜೆಪಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್ ಡಿಎ ಮೈತ್ರಿಪಕ್ಷಗಳೊಂದಿಗೆ ಚುನಾವಣೆ ಎದುರಿಸಲಿದ್ದು, ಬಿಹಾರದಲ್ಲಿ ಎನ್ ಡಿಎಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ, ಸೀಟು ಹಂಚಿಕೆ ಸಂಬಂಧ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸುದ್ದಿಗಾರರಿಗೆ ಅಮಿತ್ ಶಾ ತಿಳಿಸಿದರು.

ಬಿಜೆಪಿ ರಾಮಮಂದಿರದಂತ ವಿಚಾರಗಳಿಗೆ ಹೆಚ್ಚಿನ ಗಮನ ನೀಡುತ್ತಿದೆ. ವಾಸ್ತವ ಅಭಿವೃದ್ದಿ ವಿಚಾರಗಳ ಬಗ್ಗೆ ಗಮನ ಹರಿಸಬೇಕೆಂದು ಎಲ್ ಜೆಪಿಯ ಮುಖಂಡ ಚಿರಾಗ್ ಪಾಸ್ವನ್ ಸಾರ್ವಜನಿಕವಾಗಿ ಹೇಳಿಕೆ ನೀಡಿದರಲ್ಲದೇ, ಸೀಟು ಹಂಚಿಕೆ ಸಂಬಂಧವೂ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಮಧ್ಯೆ ಆರ್ ಎಲ್ ಎಸ್ ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಎನ್ ಡಿಎ ತೊರೆದು ಯುುಪಿಎ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ  ಆರ್ ಜೆಡಿ ಜೊತೆ ಸೇರಿ ಚುನಾವಣೆ ಎದುರಿಸಿದ ಜೆಡಿಯು, ಈಗ  ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ.

About the author

ಕನ್ನಡ ಟುಡೆ

Leave a Comment