ರಾಜಕೀಯ

2019 ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿ ಯಾರು

ಬೆಂಗಳೂರು: ಮುಂದಿನ ವರ್ಷದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ  ಸಿದ್ಧತಾ ಕಾರ್ಯ ಆರಂಭಿಸಿರುವ  ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹುಡುಕಾಟನಲ್ಲಿ ನಿರತವಾಗಿವೆ.

ಬಿಜೆಪಿ, ಕಾಂಗ್ರೆಸ್, ಹಾಗೂ ಜೆಡಿಎಸ್ ಪಕ್ಷಗಳು ರಾಜಕೀಯ ಲಾಭ- ನಷ್ಟದ ಲೆಕ್ಕಾಚಾರದಲ್ಲಿ ತೊಡಗಿದ್ದು, ರೂಪುರೇಷೆ ಸಿದ್ಧಪಡಿಸುತ್ತಿವೆ. ಈ ಮಧ್ಯೆ ಇತ್ತೀಚಿಗೆ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು  ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರು ಪ್ರತಿನಿಧಿಸಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆರು ಬಾರಿ ಗೆದ್ದು, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 

ಆದರೆ, ಅವರ ಆಕಾಲಿಕ ನಿಧನದಿಂದಾಗಿ ಈ ಕ್ಷೇತ್ರದಿಂದ ಯಾರನ್ನು ಮುಂದಿನ ಚುನಾವಣೆಗೆ ನಿಲ್ಲಿಸಬೇಕು ಎಂಬುದು ಬಿಜೆಪಿಯಲ್ಲಿ ಪ್ರಶ್ನೆ ಹುಟ್ಟುಹಾಕಿದೆ.  ಬೆಂಗಳೂರು ದಕ್ಷಿಣ  ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಒಲವು ಹೊಂದಿದೆ. ಆದರೆ. ತೇಜಸ್ವಿನಿ ಅವರು ರಾಜಕೀಯದಿಂದ ದೂರ ಉಳಿಯಲು ಬಯಸುತ್ತಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಒಂದು ವೇಳೆ ತೇಜಸ್ವಿನಿ ಅನಂತ್ ಕುಮಾರ್ ಚುನಾವಣೆಗೆ ನಿಲ್ಲಲು ಮನಸ್ಸು ಮಾಡದಿದ್ದರೆ ಮುಂದೆ ಯಾರು ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬಿಜೆಪಿಯಿಂದ ಪ್ರತಿನಿಧಿಸಲಿದ್ದಾರೆ ಎಂಬುದು ಅನೇಕ  ಊಹಾಪೋಹಗಳನ್ನು ಹುಟ್ಟುಹಾಕಿದೆ.

About the author

ಕನ್ನಡ ಟುಡೆ

Leave a Comment