ಕೊರೋನಾ ಭೀತಿ : ದೇವಸ್ಥಾನಗಳಲ್ಲಿ ಅಭಿಷೇಕ ರದ್ದು.

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಭಕ್ತರ ಪ್ರಮಾಣ ಕಡಿಮೆಯಾಗುತ್ತಿದೆ. ಶ್ರೀಶೈಲ ಜಗದ್ಗುರುಗಳ ಆದೇಶದ ಮೇರೆಗೆ ಶ್ರೀವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಅಭಿಷೇಕ ಬಂದ್ ಮಾಡಲಾಗಿದೆ.
ದೇವಸ್ಥಾನಗಳ ಮೇಲೂ ಇದರಿಂದ ಪ್ರಭಾವ ಉಂಟಾಗಿದೆ. ಉತ್ತರ ಕರ್ನಾಟಕದ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿಯೂ ಭಕ್ತರ ಪ್ರಮಾಣ ಕಡಿಮೆಯಾಗುತ್ತಿದೆ.
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯಡೂರಿನ ಶ್ರೀ ವೀರಭದ್ರೇಶ್ವರ ಗರ್ಭಗುಡಿಯಲ್ಲಿ ಅಭಿಷೇಕ ಬಂದ್ ಮಾಡಲಾಗಿದ್ದು, ಪ್ರಸಾದ ಪಡೆಯಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.
Share