ರಾಜ್ಯ ಸರ್ಕಾರದಿಂದ ವೈದ್ಯಕೀಯ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹ ಧನ ಹಾಗೂ ವಿಮಾ ಸೌಲಭ್ಯ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತರ ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಹ್ಯಾಷ್ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ನಮ್ಮ ಯೋಧರೆಂದು ಬಿಂಬಿಸಲಾಗುವುದು ಎಂದರು.
ಇನ್ನು ಬುಧವಾರ ಸೋಂಕು ದೃಢಪಟ್ಟವರ ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗಳಿಗೂ ಸೂಕ್ತ ಸಲಹೆ, ಸೂಚನೆ ನೀಡಿ ಮನೆಯಲಲ್‌ಇಯೇ ನಿಗಾ ವಹಿಸಲಾಗಿದ್ದು, ಯಾರಲ್ಲೂ ರೋಗ ಲಕ್ಷಣಗಳು ಕಂಡು ಬಂದಿಲ್ಲ.
ಕೊರೊನಾ ಸೋಂಕಿತರು ಸ್ವಂತ ಖರ್ಚಿನಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಾರೆ ಎಂದರೆ ಅವಕಾಶ ಇದೆ ಎಂದು ತಿಳಿಸಿದರು.
Share