ಬೆಳಗಾವಿ ಜಿಲ್ಲೆ: ಮತ್ತೇ ಮೂರು ಪ್ರಕರಣಗಳ ವರದಿ ನೆಗೆಟಿವ್- ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ : ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಲ್ಕು ಮಾದರಿಗಳ ಪೈಕಿ ಇನ್ನೊಂದು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಳಿಸಲಾಗಿದ್ದ ಹತ್ತು ಮಾದರಿಗಳು ಕೂಡ ನೆಗೆಟಿವ್ ಬಂದಿರುತ್ತವೆ. ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ಹದಿನೈದು ಮಾದರಿಗಳ ಪೈಕಿ ಇದೀಗ ಹದಿನಾಲ್ಕು ನೆಗೆಟಿವ್ ಬಂದಿರುತ್ತವೆ.

ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

Share