ಗಡಿ ತಾಲ್ಲೂಕು ಅಥಣಿಯಲ್ಲಿ ಸಂಸತ್ ಸದಸ್ಯ ಮಹಾಂತೇಶ ಕವಟಗಿಮಠ ಅಧಿಕಾರಿಗಳ ಸಭೆ

ಅಥಣಿ: ಕೊರೊನಾ ಕಟ್ಟೆಚ್ಚರ ಮತ್ತು ಮುಂದುವರೆದ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿಕ್ಕೋಡಿ ಎಮ್ ಎಲ್ ಸಿ ಮಹಾಂತೇಶ ಕವಟಗಿಮಠ ರಿಂದ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.
ಈ ವೇಳೆ ಕಂದಾಯ ಇಲಾಖೆ,ಪುರಸಭೆ,ಆರೊಗ್ಯ ಇಲಾಖೆ ಮತ್ತು ಸಮಾಜಕಲ್ಯಾಣ ಇಲಾಖೆ ,ಪೋಲಿಸ್ ಇಲಾಖೆ ತಾಲ್ಲೂಕು ದಂಡಾಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಂತೇಶ ಕವಟಗಿಮಠ
ಮಹಾರಾಷ್ಟ್ರದ ಕೊಲ್ಹಾಪುರ ಸೊಲ್ಲಾಪುರ ಸಾಂಗ್ಲಿ ಪುನಾ ಮುಂಬೈ ಜನ ಬರುತ್ತಿದ್ದು ಅವರನ್ನು ಒತ್ತಾಯ ಪೂರ್ವಕವಾಗಿ ಕಳುಹಿಸಬಾರದು. ಸಾಕಷ್ಟು ಜನ ಕೂಲಿಕಾರ್ಮಿಕರು ಬಡವರು ನಿರ್ಗತಿಕರು ತಮ್ಮ ಊರುಗಳಿಗೆ ನಡೆದುಕೊಂಡು ಹೋಗುತ್ತಿರುವ ಬಗ್ಗೆ ಮಾಹಿತಿ ಇದೆ.
ಪ್ರಧಾನಿ ಮೋದಿ ಅವರು ಅಂತಹ ಜನರಿಗೆ ಊಟ ವಸತಿ ವ್ಯವಸ್ಥೆ ಮಾಡಲು ಆದೇಶಿಸಿದ್ದು ಮಹಾರಾಷ್ಟ್ರ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವಿ ಮಾಡಲಿದ್ದೆವೆ ಅಷ್ಟೇ ಅಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಮತ್ತು ಸಲಕರಣೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಸರ್ಕಾರ ಪರಿಸ್ಥಿತಿ ನಿಯಂತ್ರಣ ಮಾಡಲು ಸಕಲ ಸಿದ್ದತೆ ಮಾಡಿಕೊಂಡಿದೆ ಹಾಗೂ ನಿತ್ಯ ಬಳಕೆಯ ವಸ್ತುಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಿಕೊಂಡರೆ ಅಂತಹ ವ್ಯಾಪಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಈ ಸದರ್ಭದಲ್ಲಿ ಚಿಕೋಡಿ ಯುವ ಮೊರ್ಚಾ ಅಧ್ಯಕ್ಷ ಚಿದಾನಂದ ಸವದಿ ಉಪಸ್ಥಿತಿ ಇದ್ದರು. 
ಅಥಣಿ ಪ್ರವಾಸಿ ಮಂದಿರದಲ್ಲಿ
ಅಧಿಕಾರಿಗಳ ಸಭೆಯಲ್ಲಿ ತಾಲ್ಲೂಕು ಪಂಚಾಯತ ಕಾರ್ಯನೀರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ. ತಾಲ್ಲೂಕು ವೈದ್ಯಾಧಿಕಾರಿ ಡಾ ಸಂಗಮೆಶ್ ಕೊಪ್ಪದ. ತಾಲ್ಲೂಕು ದಂಢಾಧಿಕಾರಿ ದುಂಡಪ್ಪ ಕೋಮಾರ. ಅಥಣಿ ಸಿಪಿಐ ಶಂಕರಗೌಡ ಬಸನಗೌಡರ. ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ್ ಕವಲಾಪೂರ, ಸಮಾಜ ಕಲ್ಯಾಣ ಇಲಾಖೆಯ ಬಿ ಎಸ್ ಯಾದವಾಡ. ಆಹಾರ ಇಲಾಖೆ ಬಿರಾದಾರ. ಸೇರಿದಂತೆ ಹಲವರು ಉಪಸ್ಥಿತರಿದ್ದರು.
Share
WhatsApp
Follow by Email