ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ : ಏಪ್ರಿಲ್ 20 ರ ವರೆಗೆ ಮದ್ಯದಂಗಡಿ ಓಪನ್ ಇಲ್ಲ

ಬೆಂಗಳೂರು : ಏಪ್ರಿಲ್ 14 ರ ಬಳಿಕ ಮದ್ಯದ ಅಂಗಡಿಗಳು ಓಪನ್ ಆಗಲಿವೆ ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಮದ್ಯಪ್ರಿಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಇನ್ನೊಂದು ವಾರ ಅಂಗಡಿಗಳನ್ನು ಯಾವುದೇ ಕಾರಣಕ್ಕೂ ತೆರೆಯದಿರಲು ಸರ್ಕಾರ ನಿರ್ಧರಿಸಿದೆ.
ಏಪ್ರಿಲ್ 20 ರ ವರೆಗೆ ಎಂ.ಎಸ್.ಐ.ಎಲ್ ಸೇರಿದಂತೆ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯುವುದಿಲ್ಲ. ಏಪ್ರಿಲ್ 20ರ ವರೆಗೆ ಕಟ್ಟು ನಿಟ್ಟಾಗಿ ಲಾಕ್ ಡೌನ್ ಪಾಲಿಸಬೇಕಾಗಿರುವುದರಿಂದ, ಅಲ್ಲಿಯ ತನಕ ಮದ್ಯ ಮಾರಾಟಕ್ಕೆ ಅವಕಾಶ ಕೊಡುವ ಪ್ರಶ್ನೆಯೇ ಇಲ್ಲ ಎಂದು ಅಬಕಾರಿ ಸಚಿವ ಹೆಚ್ ನಾಗೇಶ ಅವರು ಇಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತಂತೆ ಮಾತನಾಡಿರುವ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 20 ರ ವರೆಗೆ ಅತ್ಯಂತ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸುವಂತೆ ಹೇಳಿದ್ದಾರೆ. ಹೀಗಾಗಿ, ಆ ದಿನಾಂಕದ ಬಳಿಕವೇ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವುದರ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ.
Share