ಸರಳ ರೀತಿಯಲ್ಲಿ ಗ್ರಾಪಂ ಸಭಾ ಭವನ ಹಾಗೂ ವಾಣಿಜ್ಯ ಮಳಿಗೆಗಳ ಉದ್ಘಾಟನೆ

ಹಳ್ಳೂರ : ಕೆಎಂಎಫ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕೊರೋನಾ ವೈರಸ ಹಿನ್ನೆಲೆ ಸರಳ ರೀತಿಯಲ್ಲಿ ಸೋಮವಾರದಂದು ಗ್ರಾಮದಲ್ಲಿ 14ನೇ ಹಣಕಾಸು ಯೋಜನೆಯಡಿ ಹಾಗೂ ಎಸ್ಕ್ರೋ ಯೋಜನೆಯಡಿಯಲ್ಲಿ ಸುಮಾರು 18 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ ಗ್ರಾಪಂ ಸಭಾ ಭವನ ಹಗೂ ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗವನ್ನು ಮಾಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರ ಕಚೇರಿಯ ಸಿಬ್ಬಂದಿಗಳು, ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಮುಖಂಡರು ಮತ್ತು ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.