ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮನವಿ

ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮನವಿ

ಹಾರೂಗೇರಿ : ಕೋವಿಡ್-19 ವಿರುದ್ಧ ಹೋರಾಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳಾದ ಸಾಮಾನ್ಯ ಕೆಲಸಕ್ಕೆ ಸಮಾನ ವೇತನ ಸೇವಾ ಭದ್ರತೆ ಆರೋಗ್ಯ ಮತ್ತು ಜೀವ ವಿಮೆ ಎಚ್ ಆರ್ ಪಾಲಸಿ ಹಾಗೂ ಇನ್ನಿತರ ಒಟ್ಟು 14 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ನೊಂದ ನೌಕರರ ಪರವಾಗಿ ಆಗ್ರಹಿಸಲು ಕುಡಚಿ ಶಾಸಕ ಪಿ ರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಯಾವುದೇ ಸೌಲಭ್ಯ ಇಲ್ಲದಿರುವ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕರ್ತವ್ಯ ನಿರತ ಸ್ಥಳದಲ್ಲಿ ಕಪ್ಪುಪಟ್ಟಿ ಧರಿಸಿ ಜೊತೆಗೆ ವಿಶೇಷ ರೀತಿಯಲ್ಲಿ ಪ್ರದರ್ಶನ ಮೂಲಕ ರಾಜ್ಯದಾದ್ಯಂತ ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಇದರ ನಂತರ ಇಲಾಖೆಯು ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿವಾರ್ಯವಾಗಿ ಕೆಲಸಕ್ಕೆ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿಯಬೇಕಾಗುತ್ತದೆ.
ಶಾಸಕರು ಇದರ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಎಲ್ಲ ಪ್ರಕಾರದ ಆರೋಗ್ಯ ಸೇವೆ ನೀಡುವ ನೌಕರರನ್ನು ಪರಿಗಣಿಸಬೇಕು ಮತ್ತು ತಾರತಮ್ಯ ಮಾಡಬಾರದು ಎಂದು ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಾರ್ವಜನಿಕರಿಗೆ ಅಗತ್ಯವಾದ ಇಲಾಖೆಯ ನೌಕರರನ್ನು ಮುಷ್ಕರ ಮಾಡುವ ಅನಿವಾರ್ಯ ಸ್ಥಿತಿಗೆ ಬಿಡಬಾರದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಇದನ್ನು ವಿಶೇಷ ಇಲಾಖೆ ಎಂದು ಪರಿಗಣಿಸಿ ಸರ್ಕಾರ ನೌಕರರ ಹಿತಕ್ಕೆ ಆದ್ಯತೆ ನೀಡಿ ಸಾರ್ವಜನಿಕರಿಗೆ ಸೇವೆ ನೀಡುವುದು ನಮ್ಮ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಆರೋಗ್ಯ ಸಚಿವರಿಗೆ ಶಿಫಾರಸು ಮಾಡಲು ಶಾಸಕರಲ್ಲಿ ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Share
WhatsApp
Follow by Email