ಮೂಡಲಗಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆಮೂಡಲಗಿ: ‘ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆಯ ನಿರ್ಮೂಲನೆಗೆ ಒಗ್ಗಟ್ಟು ಮತ್ತು ದೇಶಾಭಿಮಾನದ ಬದ್ಧತೆ ಬೇಕು’ ಎಂದು ರಾಜ್ಯಶಾಸ್ತ ಪ್ರಾಧ್ಯಾಪಕ ಪ್ರೊ. ಶಿವಕುಮಾರ ಶಾಸ್ತಿಮಠ ಹೇಳಿದರು.
ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಭಯೋತ್ಪಾದನೆಯಿಂದ ದೇಶದ ಪ್ರಗತಿಗೆ ಮಾರಕವಾಗುತ್ತದೆ ಎಂದರು.
ಅತಿಥಿಯಾಗಿದ್ದ ವಿಜಯಪುರದ ಮಲ್ಲಿಕಾರ್ಜುನ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ ಮುಳವಾಡ ಮಾತನಾಡಿ ದೇಶದಲ್ಲಿ ಶಾಂತಿ, ನೆಮ್ಮದಿ ಇರಬೇಕಾದರೆ ಭಯೋತ್ಪಾದನೆ ಇರಬಾರದು ಎಂದರು.
ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಡಾ.ಆರ್.ಎ. ಶಾಸ್ತಿಮಠ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ವೇದಿಕೆಯಲ್ಲಿ ನ್ಯಾಕ್ ಸಂಯೋಜಕ ಡಾ.ವಿ.ಆರ್. ದೇವರಡ್ಡಿ ಇದ್ದರು