ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ ನಿಂದ ಎಂದಿನಂತೆ ಪದವಿ ತರಗತಿಗಳು ಆರಂಭ

ಬೆಂಗಳೂರು: ಅಕ್ಟೋಬರ್ 1ರಿಂದ ಎಂದಿನಂತೆ ಪದವಿ ತರಗತಿಗಳನ್ನು ಆರಂಭಿಸುವ ಬಗ್ಗೆ ಸಿದ್ಧತೆಗಳು ನಡೆದಿವೆ. ಕೊವಿಡ್ ನಿಂದಾಗಿ ಈಗಾಗಲೇ ಆನ್ ಲೈನ್ ತರಗತಿಗಳು ನಡೆಯುತ್ತಿವೆ. ಅಕ್ಟೋಬರ್ ನಿಂದ ಆಫ್ ಲೈನ್ ಆಗಲಿವೆ ಎಂದು ತಿಳಿದುಬಂದಿದೆ.

ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್‌ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.

ಈ ಕುರಿತು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್‌ ನಾರಾಯಣ್‌ ಮಾತನಾಡಿದ್ದು, ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್​​ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ತಿಳಿಸಿದ್ದಾರೆ.

ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದರು.

About the author

admin