ಕೆಪಿಟಿಸಿಎಲ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ತಂದೆ ಮಗನ ಸೆರೆ.

ಗದಗ: ಕೆಪಿಟಿಸಿಎಲ್‌( KPTCL) ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಗದುಗಿನ ಮುನ್ಸಿಪಲ್‌ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತ್‌ ಕುಮಾರ್‌ ಎಂಬುವವರನ್ನು ಬೆಳಗಾವಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ನಗರದ ಮುನ್ಸಿಪಲ್‌ ಕಾಲೇಜು ಸೇರಿದಂತೆ ಅವಳಿ ನಗರದ 21 ಕಡೆಗಳಲ್ಲಿ ಆ.7ರಂದು ಪರೀಕ್ಷೆ ನಡೆದಿತ್ತು. ಗದಗದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ವಿಚಾರಣೆ ಚುರುಕುಗೊಳಿಸುತ್ತಿದ್ದಂತೆ, ತಂದೆ– ಮಗ ಪ್ರಶ್ನೆಪತ್ರಿಕೆ ಸೋರಿಕೆಗೆ ಕೈ ಜೋಡಿಸಿದ್ದಾರೆ ಎನ್ನುವ ವಿಷಯ ಬಹಿರಂಗವಾಗಿತ್ತು.ಪತ್ರಕರ್ತನ ಸೋಗಿನಲ್ಲಿ ಮುನ್ಸಿಪಲ್‌ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಸಮೀತ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆ ಫೋಟೊ ತೆಗೆದುಕೊಂಡಿದ್ದಾನೆ. ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಫೋಟೊವನ್ನು ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೂಕಳಿಸಿರುವ ಸಾಧ್ಯತೆಗಳಿವೆ ಎಂದು ಸೈಬರ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Share
WhatsApp
Follow by Email