ರಾಜಕೀಯ

3 ಪಕ್ಷಗಳಿಗೂ ಉಪ ಚುನಾವಣೆ ಅಗ್ನಿಪರೀಕ್ಷೆ: ಅನಿತಾ ಗೆಲುವು ಬಹುತೇಕ ಖಚಿತ

ಬೆಂಗಳೂರು:  ಇಂದು  ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮೂರು ಪಕ್ಷಗಳಿಗೂ ಅಗ್ನಿ ಪರೀಕ್ಷೆಯಾಗಿದೆ, ಕಾಂಗ್ರೆಸ್ -ಜೆಡಿಎಸ್ ದೋಸ್ತಿ ತಮ್ಮ ಶಕ್ತಿ ಸಾಮರ್ಥ್ಯ ತೋರಿಸಬೇಕಿದೆ. ಬಿಜೆಪಿ ನಾಯಕತ್ವವನ್ನು ಒರೆಗೆ ಹಚ್ಚಿರುವ ಚುನಾವಣೆ ಇದಾಗಿದೆ. 2019ರ ಲೋಕಸಭೆ ಚುನಾವಣೆಗೆ ಇದು ಮುನ್ನುಡಿಯಾಗಲಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 6 ರವರೆಗೂ ನಡೆಯಲಿದೆ. ಆದರೆ ಮತದಾರರು ಈ ಚುನಾವಣೆ ಬಗ್ಗೆ ಅಧಿಕ ಉತ್ಸಾಹ ತೋರುತ್ತಿಲ್ಲ, ಸುಮಾರು 54,54 ಲಕ್ಷ ಮಂದಿ ತಮ್ಮ ಮತ ಚಲಾಯಿಸಲಿದ್ದಾರೆ. ಕಣದಲ್ಲಿ 31 ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಇಬ್ಬರು ಮಹಿಳೆಯರು. ಒಟ್ಟು 40 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅವುಗಳಲ್ಲೆ ಕೆಲವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ, ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ,  ರಾಮನಗರ ಮತ್ತು ಜಮಖಂಡಿಯಲ್ಲಿ ತಲಾ 7 ಅಭ್ಯರ್ಥಿಗಳಿದ್ದಾರೆ. ಲೋಕಸಭೆ ಉಪ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಧಿಕಾರವಧಿ ಕೇವಲ ಆರು ತಿಂಗಳು ಮಾತ್ರ, 2019ರಲ್ಲಿ ನಡೆಯುವ ಚುನಾವಣೆ ವರೆಗ ಮಾತ್ರ ಅರು ಸಂಸದರಾಗಿರುತ್ತಾರೆ, ಆದರೆ ರಾಜಕೀಯ ಪಕ್ಷಗಳ ಉತ್ಸಾಹ ಮಾತ್ರ ಕುಗ್ಗಿಲ್ಲ, ಮೂರು ಪಕ್ಷಗಳು ಉಪ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು ಹೈ ವೊಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿವೆ. ಈ ಹಿನ್ನೆಲೆಯಲ್ಲಿ 12 ವರ್ಷಗಳಿಂದ ಹಾವು-ಮುಂಗುಸಿಯಂತಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಒಗ್ಗಟ್ಟಾಗಿದ್ದಾಕೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾಮನ್ ಎನಿಮಿ ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ, ಹೀಗಾಗಿ ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಜಂಟಿ ಪ್ರಚಾರ ನಡೆಸಿದ್ದಾರೆ, ಎಲ್ಲಾ 5 ಕ್ಷೇತ್ರಗಳಲ್ಲಿ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್ ಶಿವರಾಮೇಗೌಡ ಹಾಗೂ ರಾಮನಗರದಲ್ಲಿ ಕುಮಾರ ಸ್ವಾಮಿ ಪತ್ನಿ ಅನಿತಾ ಗೆಲುವು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ
ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ಶಿವಮೊಗ್ಗದಲ್ಲಿ ಬಿಜೆಪಿಗೆ ಉತ್ತಮ ಫೈಟ್ ನೀಡಿವೆ, ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಕಾಂಗ್ರೆಸ್ ಪ್ರಚಾರ ನಡೆಸಿದೆ, ಇನ್ನೂ  ಡಿ,ಕೆ ಶಿವಕುಮಾರ್ ಮತ್ತು ಬಿಜೆಪಿಯ ಶ್ರೀರಾಮುಲು ಬಳ್ಳಾರಿ ಲೋಕಸಭೆ ಕ್ಷೇತ್ರವನ್ನು ವೈಯಕ್ತಿಕ ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ, ಉಗ್ರಪ್ಪ ಮತ್ತು ಜೆ, ಶಾಂತಾ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಇನ್ನೂ ಬಳ್ಳಾರಿಯ ಹರಗಿನ ದೋಣಿ ಮತ್ತು ಮಂಡ್ಯದ ಬೆಳೆಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸುವ ಬೆದರಿಕೆ ಹಾಕಲಾಗಿದೆ.

About the author

ಕನ್ನಡ ಟುಡೆ

Leave a Comment