ರಾಜ್ಯ ಸುದ್ದಿ

ಕನ್ನಡ ಪ್ರಶ್ನೆ ಪತ್ರಿಕೆ ಲೀಕ್ ವದಂತಿ: ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ ಪಿಯು ಇಲಾಖೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವುದು ವದಂತಿ ಅಷ್ಟೆ ಎಂದು ಪಿಯು ಬೋರ್ಡ್ ಸ್ಪಷ್ಟಪಡಿಸಿದೆ. ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಿಯುಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಹಬ್ಬಿದ್ದು, ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿತ್ತು.

ಇಂದು (ಶನಿವಾರ) ನಡೆಯುತ್ತಿರುವ ದ್ವಿತೀಯ ಪಿಯುಸಿ ಕನ್ನಡ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಯ ಪ್ರತಿ ಹರಿದಾಡುತ್ತಿದೆ ಎಂದು ಸಿಸಿಬಿ ಅಧಿಕಾರಿಗಳು ಶುಕ್ರವಾರ ಮಧ್ಯರಾತ್ರಿ ಮಾಹಿತಿ ನೀಡಿದ್ದರು. ಹೀಗಾಗಿ ಕೂಡಲೇ ಪರಿಶೀಲನೆ ನಡೆಸಿದ್ದು, ಅದು ನಕಲಿ ಪ್ರಶ್ನೆ ಪತ್ರಿಕೆ ಎಂದು ಸಷ್ಟವಾಗಿರುವುದಾಗಿ ಪಿಯ ಬೋರ್ಡ್‌ನ ನಿರ್ದೇಶಕ ಪಿ ಸಿ ಜಾಫರ್ ತಿಳಿಸಿದ್ದಾರೆ.

ನಕಲಿ ಎಂದು ತಿಳಿದು ಬಂದಿದ್ದು ಹೇಗೆ? 

1. ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ (002) ಹಾಗೂ ಅಸಲಿ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ವಿಭಿನ್ನವಾಗಿದೆ.

2. ಲೀಕ್ ಆಗಿದೆ ಎಂದು ಹೇಳಲಾಗುತ್ತಿರುವ ಪ್ರಶ್ನೆ ಪತ್ರಿಕೆ ಮೇಲಿನ ಬಾರ್ ಕೋಡ್ ಹಾಗೂ ಪಿಯು ಬೋರ್ಡ್ ಬಳಸುವ ಬಾರ್ ಕೋಡ್‌ಗೆ ತಾಳೆಯಾಗುತ್ತಿಲ್ಲ.

3. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಯ ಪ್ರತಿ ಹರಿದಾಡುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪ್ರಶ್ನೆ ಪತ್ರಿಕೆ ಇರಿಸುವ ಸ್ಟ್ರಾಂಗ್ ರೂಮ್‌ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಬಂಡಲ್‌ಗೆ ಯಾವುದೇ ಧಕ್ಕೆಯಾಗದಿರುವುದು ಕಂಡು ಬಂದಿದೆ.

4. ಸ್ಟ್ರಾಂಗ್ ರೂಮ್‌ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಮುಖ್ಯ ಕಚೇರಿಗೆ ಲೈವ್ ಸ್ಟ್ರೀಮಿಂಗ್ ಮಾಡುವ ವ್ಯವಸ್ಥೆ ಇರುತ್ತದೆ. ಈ ದೃಶ್ಯಾವಳಿಗಳನ್ನು 24*7 ಮೇಲ್ವಿಚಾರಣೆಯಲ್ಲಿರುತ್ತದೆ.

 

About the author

ಕನ್ನಡ ಟುಡೆ

Leave a Comment