ರಾಜಕೀಯ

ಕೋತಿ ತಾನೂ ಕೆಡೋದಲ್ದೆ; ಸಿದ್ದುಗೆ ಟಾಂಗ್ ನೀಡಿದ ಬಿಜೆಪಿ

ಬೆಂಗಳೂರು: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿರುವ ಸಂಬಂಧ ರಾಜ್ಯ ಬಿಜೆಪಿ ಕಾಂಗ್ರೆಸ್  ಕಾಲೆಳೆದಿದೆ. ತನ್ನ ಕ್ಷೇತ್ರದಲ್ಲಿ ತಾವೇ ಗೆಲ್ಲಲು ಸಾಧ್ಯವಾಗದವರು ಮತ್ತೊಬ್ಬರಿಗೆ ಕಾರ್ಪೆಟ್ ಹಾಕಿ ಸ್ವಾಗತಿಸುತ್ತಿದ್ದಾರೆ, ಕೋತಿ ತಾನು ಕೆಡೋದಲ್ದೆ ಎಂಬ ಗಾದೆ ಮಾತು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. ಈ ಬಾರಿ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ. ಕರ್ನಾಟಕ ಯಾವಾಗಲೂ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿದೆ. ಇದು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಸಹ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ, ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪರವಾಗಿ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

About the author

ಕನ್ನಡ ಟುಡೆ

Leave a Comment