ರಾಜ್ಯ ಸುದ್ದಿ

ಜಂತಕಲ್‌ ಕೇಸ್‌: ಜಾಮೀನು ಷರತ್ತು ಸಡಿಲಿಕೆಗೆ ಮುಖ್ಯಮಂತ್ರಿ ಮನವಿ

ಬೆಂಗಳೂರು: ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಷರತ್ತು ಸಡಿಲಿಕೆ ಕೋರಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿಕೆಯಲ್ಲಿ ಅಕ್ರಮ ನಡೆಸಲಾಗಿದೆ. ಅದರಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ ಎಂಬ ಆರೋಪದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ವಿಶೇಷ ತನಿಖಾ ದಳ (ಎಸ್‌ಐಟಿ) ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಆರೋಪಿಗಳು ಷರತ್ತುಬದ್ದ ಜಾಮೀನು ಪಡೆದಿದ್ದಾರೆ. ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳದಂತೆ ವಿಧಿಸಿರುವ ಷರತ್ತನ್ನು ಸಡಿಲಿಸುವಂತೆ ಕೋರಿ ಕುಮಾರಸ್ವಾಮಿ ಶುಕ್ರವಾರ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನ್ಯಾಯಾಲಯ ಮಾ.28ಕ್ಕೆ ಮುಂದೂಡಿದೆ.

About the author

ಕನ್ನಡ ಟುಡೆ

Leave a Comment