ರಾಜಕೀಯ

ಲೋಕಸಭೆ ಚುನಾವಣೆ: ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಆಹ್ವಾನ

ಬೆಂಗಳೂರು: ಈ ಬಾರಿ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ. ಕರ್ನಾಟಕ ಯಾವಾಗಲೂ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿದೆ. ಇದು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಸಹ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ, ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪರವಾಗಿ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುವ ರಾಹುಲ್ ಗಾಂಧಿಗೆ ಈ ಬಾರಿ ಕರ್ನಾಟಕದಿಂದಲೂ ಸ್ಪರ್ಧಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರು #RaGaFromKarnataka ಎಂಬ ಹ್ಯಾಷ್‌ ಟ್ಯಾಗ್ ಬಳಸಿ ಟ್ವಿಟ್ಟರ್ ಅಭಿಯಾನ ಆರಂಭಿಸಿದ್ದಾರೆ.

About the author

ಕನ್ನಡ ಟುಡೆ

Leave a Comment