ಬೆಂಕಿ ದುರಂತ : ಎರಡು ಮನೆಗಳು ಸಂಪೂರ್ಣ ಸುಟ್ಟು ಭಸ್ಮ

ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಓಣಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಬೆಂಕಿ ದುರಂತದಲ್ಲಿ ಎರಡು ಮನೆಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಮನೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಹಿರೇಬಾಗೇವಾಡಿ ಪೇಟೆ ಓಣಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಬೆಂಕಿ ದುರಂತದಲ್ಲಿ ಅಕ್ಕಪಕ್ಕದಲ್ಲಿದ್ದ ಎರಡು ಮನೆಗಳು ಸುಟ್ಟು ಭಸ್ಮವಾಗಿವೆ. ಹಿರೇಬಾಗೇವಾಡಿ ನಿವಾಸಿ ಶಿವಪ್ಪ ಸಿದ್ಲಿಂಗಪ್ಪ ಗಾಣಗಿ, ನಾಗರಾಜ ಅಪ್ಪಯ್ಯ ಅಗಸಿಮನಿ ಎಂಬುವವರಿಗೆ ಮನೆಗಳು ಸೇರಿದ್ದು,

ಮನೆಗೆ ಬೀಗ ಹಾಕಿಕೊಂಡು ಮನೆಯವರೆಲ್ಲ ದೇವಸ್ಥಾನಕ್ಕೆ ತೆರಳಿದ್ದಾಗ ಘಟನೆ ನಡೆದಿದೆ.
ದೇವರಮನೆಯಲ್ಲಿ ಇರಿಸಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.

ಅಕ್ಕಪಕ್ಕದಲ್ಲಿದ್ದ ಎರಡೂ ಮನೆಗಳ ಆಕಸ್ಮಿಕ ಬೆಂಕಿಯನ್ನು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಪ್ರಕರಣ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Share
WhatsApp
Follow by Email