ಮಧ್ಯಪ್ರದೇಶ : ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ನಾಮಪತ್ರ ಸಲ್ಲಿಸಿದ್ದು, ಈ ಉಮೇದುವಾರಿಕೆಯಲ್ಲಿ ಅವರು ತಮ್ಮ ಮೇಲಿರುವ ಸಹಿ ನಕಲು ಮಾಡಿರುವ ಪ್ರಕರಣದ ಕುರಿತು ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ 2014ರಲ್ಲಿ ಆರ್ಥಿಕ ಅಪರಾಧ ವಿಭಾಗ ಭೂ ಕಬಳಿಕೆ ಪ್ರಕರಣ ದಾಖಲಿಸಿತ್ತು. ನಕಲಿ ಸಹಿ ಹಾಕುವ ಮೂಲಕ ಭೂ ಕಬಳಿಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಈ ಪ್ರಕರಣವನ್ನು 2018ರಲ್ಲಿ ಕೈಬಿಡಲಾಗಿತ್ತು. ಆದರೆ, ಈ ಕುರಿತಾದ ಮಾಹಿತಿಯನ್ನು ರಾಜ್ಯಸಭಾ ಅಭ್ಯರ್ಥಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ನಾಮಪತ್ರದಲ್ಲಿ ತಿಳಿಸಿಲ್ಲ ಎಂದು ಕಾಂಗ್ರೆಸ್ ದೂರಿದೆ.
ಅಲ್ಲದೇ ಈ ಕುರಿತು ಚುನಾವಣಾ ಆಯೋಗದ ರಿಟರ್ನಿಂಗ್ ಆಫೀಸರ್ ಎದುರು ತಮ್ಮ ಆಕ್ಷೇಪಣೆಯನ್ನು ಲಿಖಿತ ರೂಪದಲ್ಲಿ ಕಾಂಗ್ರೆಸ್ ದಾಖಲಿಸಿದೆ….