ಇಟಲಿಯಲ್ಲಿ ಕೊರೊನಾ ವೈರಸ್ ಅಟ್ಟಹಾಸ : ಒಂದೇ ದಿನ 475 ಜನರು ಸಾವು

ನವದೆಹಲಿ : ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ಗೆ ಇಟಲಿ ತತ್ತರಿಸಿದ್ದು, ಬುಧವಾರ ಒಂದೇ ಇಟಲಿಯಲ್ಲಿ ಬರೋಬ್ಬರಿ 475 ಜನರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3 ಸಾವಿರ ಗಡಿ ತಲುಪಿದೆ.

ಇಟಲಿಯಲ್ಲಿ ಬುಧವಾರ ಒಂದೇ ದಿನ 4,207 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸೋಂಕು ತಗುಲಿದವರ ಸಂಖ್ಯೆ 35,000 ಕ್ಕೆ ಏರಿಕೆ ಆಗಿದೆ. ಇದು ಇಟಲಿ ಜನತೆಯಲ್ಲಿ ಆತಂಕ ಹೆಚ್ಚಿಸಿದೆ.

ಇನ್ನು ಚೀನಾದಲ್ಲಿ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಂದಿದೆ. ದಿನಕ್ಕೆ 10 ರಿಂದ 15 ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸಾವಿನ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡಿದೆ. ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 150 ರ ಗಡಿ ದಾಟಿದೆ.

Share
WhatsApp
Follow by Email