
ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಒಂದು ಕೊಠಡಿಯಲ್ಲಿ 15 ರಿಂದ 20 ಮಂದಿಯನ್ನಷ್ಟೇ ಕೂರಿಸಬೇಕು. ಅಂತರ ಕಾಪಾಡಬೇಕು ಎಂದು ತಿಳಿಸಲಾಗಿದ್ದರೂ, ಡೆಸ್ಕ್ ನಲ್ಲಿ ಒಬ್ಬರನ್ನಷ್ಟೇ ಇರಿಸುವ ಬಗ್ಗೆ ಪ್ರಸ್ತಾವ ಮಾಡಿಲ್ಲ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು, ನೆಗಡಿಯ ಲಕ್ಷಣಗಳು ಇದ್ದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗುವುದು. ಅಗತ್ಯ ಇದ್ದವರು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಬಹುದು ಎಂದು ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.