ಕೊರೊನಾ: ಬಡವರಿಗೆ ಇಂದಿರಾ ಕ್ಯಾಂಟೀನ್’ನಲ್ಲಿ ಇಡೀ ದಿನ ಉಚಿತ ಊಟ

ಬೆಂಗಳೂರು : ಒಂದೆಡೆ ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವಂತೆ, ಮತ್ತೊಂದೆಡೆ ರಾಜ್ಯದ ಅನೇಕ ಕಡೆಯಲ್ಲಿ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಒಂದು ಹೊತ್ತಿನ ಊಟಕ್ಕೆ ಜನರು ಪರದಾಡುವಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ಇಡೀ ದಿನ ಊಟ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಇಂದು ಕೊರೊನಾ ಸಂಬಂಧ ತುರ್ತು ಸಭೆಯನ್ನು ನಡೆಸಿದ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದ ಅನೇಕ ಭಾಗಗಳಲ್ಲಿ ಎಲ್ಲವೂ ಬಂದ್ ಆಗಿರುವುದರಿಂದ ಬಡವರಿಗೆ ತೊಂದರೆ ಆಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಡವರಿಗೆ ಇಡೀ ದಿನ ಇಂದಿರಾ ಕ್ಯಾಂಟೀನ್ ನಲ್ಲಿ ಉಟಿತವಾಗಿ ಊಟ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
Share
WhatsApp
Follow by Email