ರಾಜ್ಯವನ್ನು ಲಾಕ್‌ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನ: ಮುಖ್ಯಮಂತ್ರಿ

ಬೆಂಗಳೂರ : ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 144 ಸೆಕ್ಷನ್ ಮುಂದುವರಿಯಲಿದೆ. ರಾಜ್ಯಾದ್ಯಂತ ಲಾಕ್‌ಡೌನ್ ಸೇರಿದಂತೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ವಿಪಕ್ಷಗಳೊಂದಿಗೆ ಚರ್ಚಿಸಿ ಇಂದು ಸಂಜೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ದಿನವಿಡೀ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಬಡವರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕೊರೋನ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಹೋಂ ಕ್ವಾರಂಟೈನ್‌ನಲ್ಲಿಡುವುದು ಸವಾಲಿನ ಕೆಲಸವಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದು, ರಾಜ್ಯದಲ್ಲಿ 30 ಫೀವರ್ ಕ್ಲಿನಿಕ್ ಆರಂಭಿಸಲಾಗುವುದು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1000 ಬೆಡ್‌ಗಳನ್ನು ಕೊರೋನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಅನಿರ್ದಿಷ್ಟಾವಧಿಯವರೆಗೆ ನಿರ್ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Share
WhatsApp
Follow by Email