ಬ್ರೇಕಿಂಗ್ ನ್ಯೂಸ್ ಅತಿ ಶೀಘ್ರ ಚಿಕ್ಕೋಡಿಯಲ್ಲಿ ಕೊರೋನಾ ಟೆಸ್ಟ್ ಲ್ಯಾಬ್: ಸಚಿವೆ ಶಶಿಕಲಾ ಜೊಲ್ಲೆ 25/03/202025/03/2020 admin ಚಿಕ್ಕೋಡಿ : ಲೋಕೊಪಯೋಗಿ ಇಲಾಖೆ ಕಚೇರಿ ಸಭಾಗಂಣದಲ್ಲಿ ನಡೆದ ಸಭೆ, ಕೊರೋನಾ ಸೋಂಕು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸಲಹೆ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಅವರು, ಕೊರೋನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಕೊರೋನಾ ಸೋಂಕು ತಡೆ ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ಕೂಡಾ ಪ್ರಧಾನಿ ಮೋದಿಯವರು ಹೇಳಿದಂತೆ ಪ್ರತಿಯೊಬ್ಬರೂ ತಮ್ಮ ಆರೋಗ್ಯ ಕಾಪಾಡಿಕೊಂಡು ಇರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಕೊರೋನಾ ಸೋಂಕು ತಡೆಗೆ ಜನರಲ್ಲಿ ಅರಿವು ಮೂಡಿಸಬೇಕು. ಒಂದು ವೇಳೆ ಈ ಸಭೆಗೆ ಗೈರು ಹಾಜರು ಇದ್ದಂತಹ ಅಧಿಕಾರಿಗಳಿಗೆ ನೋಟಿಸ್ ನಿಡುವಂತೆ ಉಪ ವಿಭಾಗ ಅಧಿಕಾರಿಯಾದ( ಎ ಸಿ ) ರವೀಂದ್ರ ಕರಲಿಂಗನ್ನವರ ಅವರಿಗೆ ಶಾಸಕಿ ಶಶಿಕಲಾ ಜೊಲ್ಲೆ ಆದೇಶ ಮಾಡಿದರು . ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಅಣ್ಣಾಸಾಬ ಜೊಲ್ಲೆ ಮಾತನಾಡಿ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರ ದಲ್ಲಿ ಚಿಕ್ಕೋಡಿ ಯಲ್ಲಿ ಕೊರೋನಾ ಟೆಸ್ಟ್ ಲ್ಯಾಬ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಎಸಿ ರವಿಂದ್ರರ ಕರಲಿಂಗನ್ನವರ,ವೈದ್ಯಾಧಿಕಾರಿ ವಿಠ್ಠಲ ಶಿಂಧೆ ಹಾಗೂ ಚಿಕ್ಕೋಡಿ ತಹಶಿಲ್ದಾರ ,ನಿಪ್ಪಾಣಿ ತಹಶಿಲ್ದಾರ, ರಾಯಭಾಗ ತಹಶಿಲ್ದಾರ ಹುಕ್ಕೇರಿ ತಹಶಿಲ್ದಾರ ಅಥಣಿ ತಹಶಿಲ್ದಾರ,ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಎಲ್ಲಾ ತಾಲೂಕಾ ಪಂಚಾಯತಿ ಅಧಿಕಾರಿಗಳುಸಭೆಯಲ್ಲಿ ಪೊಲೀಸರು, ,ವೈದ್ಯಾದಿಕಾದಿಕಾರಿಗಳು ಶಿಕ್ಷಣ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಭಾಗವಹಿಸಿದ್ದರು. Share