ನಿನ್ನೆ ಮೃತಪಟ್ಟ ವೃದ್ಧೆಗೂ COVID19+ ಕನ್ಫರ್ಮ್ ಆಯ್ತು

ಬಳ್ಳಾರಿ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿ ಬಿದನೂರು ತಾಲೂಕಿನ ವೃದ್ಧೆ ಕರೊನಾದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ವೃದ್ಧೆಯ ಸಾವಿಗೆ ಸಂಬಂಧಿಸಿದ ವರದಿ ಬಂದಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೂಲಕ ರಾಜ್ಯದಲ್ಲಿ ಕರೊನಾದಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ಗೌರಿಬಿದನೂರು ತಾಲೂಕಿನಲ್ಲಿ ಮೃತಪಟ್ಟ ವೃದ್ಧೆಯ ಮನೆಯ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಇದುವರೆಗೆ 1.30 ಲಕ್ಷ ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 214 ಜನರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 52 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕರೊನಾಗೆ ಸಂಬಂಧಿಸಿದಂತೆ ಸಭೆ ನಡೆಸುವೆ.
ಮುಖ್ಯಮಂತ್ರಿ ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಜನರು ಆತಂಕಪಡಬಾರದು. ಆದರೆ, ಲಾಕ್ ಡೌನ್ ಇದ್ದರೂ ಅನೇಕ ಜನರು ಹೊರಗೆ ಬರುತ್ತಿದ್ದಾರೆ. ಮೊದಲು ಜೀವ ಉಳಿಸಿಕೊಳ್ಳಿ ಎಂದು ಸಚಿವ ಶ್ರೀರಾಮುಲು ಮನವಿ. ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲು ಸೂಚಿಸುವೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಗುರುವಾರ ಕರೊನಾ ವೈರಸ್ ಸಂಬಂಧಿಸಿದಂತೆ ಸಭೆ ಆಯೋಜಿಸಲಾಗಿತ್ತು. ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಬಿ.ನಾಗೇಂದ್ರ, ಎಂಎಲ್ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ ಹಾಗೂ ಇತರರು ಹಾಜರಿದ್ದರು.
Share
WhatsApp
Follow by Email