
ಬೆಳಗಾವಿ ಜಿಲ್ಲೆ ಗೋಕಾಕ್ ನಗರದಲ್ಲಿ ಬೈಕ್ ರೌಂಡ್ಸ್ ಹಾಕಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೀದಿಯಲ್ಲಿ ಸುತ್ತಾಡುತ್ತಿದ್ದ ಸಾರ್ವಜನಿಕ ರಲ್ಲಿ ಮನೆಗೆ ಹೋಗುವಂತೆ ಮನವಿ ಮಾಡಿಕೊಳ್ಳುತ್ತ ಮುಂದೆ ಸಾಗುತ್ತಿದ್ದರು.

ಬೈಕ್ ರೌಂಡ್ಸ್ಗೂ ಮುನ್ನ ಅಧಿಕಾರಿಗಳ ಜೊತೆ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಗೋಕಾಕ್ ತಾಲೂಕಿನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಮಾಹಿತಿ ಪಡೆದ ಸಚಿವರು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು