
ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸದ ಸಚಿವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಿಂದ ಕೈ ಬಿಡಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಮೂಡಲಗಿಯ ಭೀಮಪ್ಪ ಗಡಾದ ಆಗ್ರಹಿಸಿದರು.ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಬೆಳಗಾವಿಯಲ್ಲಿ ಇನ್ ನ್ಯೂಸ್ನೊಂದಿಗೆ ಭಾನುವಾರ ಮಾತನಾಡಿ, ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ನಿಯಮಗಳು, ಕಾನೂನು ಪಾಲನೆ ಆಗುತ್ತಿಲ್ಲ.
ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕೊರೋನಾ ಸೋಂಕು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಸಚಿವರು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಹಳ್ಳಿಗಳತ್ತ ತಿರುಗಿಯೂ ನೋಡುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ವಾಸ ಮಾಡಿ ಜನರ ಕಷ್ಟ ಗಳಿಗೆ ಸ್ಪಂದಿಸುವಂತೆ ಸಚಿವರಿಗೆ ನಿರ್ದೇಶನ ನೀಡಬೇಕು. ಇಲ್ಲವಾದರೆ ಅಂತಹ ಸಚಿವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.