ಪಾಲಕರಿಗೆ ಪಡಿತರ ಧಾನ್ಯಗಳ ವಿತರಣೆ.

ಮುಗಳಖೋಡ: ದೇಶದಲ್ಲಿ ಮಾರಕ ಕೋರೊನ ವೈರಸ್ ರೋಗ ಹರಡದಂತೆ ಮುಂಜಾಗ್ರತ ಕ್ರಮವಾಗಿ ಪ್ರದಾನಿ ಮೋದಿಯವರ ಸೂಚನೆಯಂತೆ ಎಪ್ರೀಲ್ 14 ರ ವರೆಗೆ 21 ದಿನಗಳ ಕಾಲ ದೇಶಾದ್ಯಂತ ಜಾರಿಯಲ್ಲಿರುವ ಕರ್ಪ್ಯೂ ಹಾಗೂ ಎಲ್ಲ ಶಾಲೆಗಳ ರಜೆ ಘೋಷಣೆಯ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀ ಹನುಮಾನ ಶಿಕ್ಷಣ ಸಂಸ್ಥೆಯ ಶ್ರೀ ಶಿವಶಕ್ತಿ ಅನುದಾನಿತ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ಶಾಲೆಯ ಆವರಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪಡಿತರ ಧಾನ್ಯಗಳನ್ನು ವಿತರಿಸಲಾಯಿತು. ಸಂಸ್ಥೆ ಅಧ್ಯಕ್ಷ ರಮೇಶ ಖೇತಗೌಡರ ಎಲ್ಲ ಪಾಲಕರಿಕೆ ಸಾಮಾಜಿಕ ಅಂತರ ಕಾಯ್ದುಕೋಳ್ಳಲು ತಿಳಿಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ರಮೇಶ ಖೇತಗೌಡರ, ಮುಖ್ಯೋಪಾಧ್ಯಾಯ ಎ.ಕೆ. ಕಾಮಗೋಡ ಉಪಸ್ಥಿತರಿದ್ದರು
Share
WhatsApp
Follow by Email