ಸಂಪಗಾಂವಿಯಲ್ಲಿ ಅಧಿಕಾರಿಗಳ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಭೆ

ಬೈಲಹೊಂಗಲ : ಬೀಕರ ಕೊರೊನಾ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಯಶಸ್ವಿಯಾಗೋಣವೆಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ಸಮೀಪದ ಸಂಪಗಾAವ ಗ್ರಾಮದಲ್ಲಿ ತಾಲೂಕಾ ಅಧಿಕಾರಿಗಳ, ಅಂಗನವಾಡಿ, ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ನಾಗರಿಕರು ಸರಕಾರದ ಆದೇಶವನ್ನು ಪಾಲಿಸಿ ಸುರಕ್ಷತೆಯಿಂದ ಮನೆಯಲ್ಲಿ ಇರಬೇಕು. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಲಾಯಿತು
Share
WhatsApp
Follow by Email