ಕೊರೋನಾ ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅಭಿನಂದಿಸಿದ ಕೆ.ಎಮ್. ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

.
ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ.
ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ ವೈದ್ಯರು, ಆಶಾ-ಅಂಗನವಾಡಿ ಕಾರ್ಯಕರ್ತರು, ಪೋಲಿಸರು ಹಾಗೂ ಮಾಧ್ಯಮ ಮಿತ್ರರಿಗೆ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Share
WhatsApp
Follow by Email