ಇಂದಿನಿಂದ ರಾಜ್ಯದಲ್ಲಿ ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಇಂದಿನಿಂದ ರಾಜ್ಯದಲ್ಲಿ ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅವರು ಮೇ.3 ರ ವರೆಗೆ ವಿಸ್ತರಿಸಿದ ಲಾಕ್ ಡೌನ್ ನ್ನು ಸ್ವಾಗತಿಸುತ್ತೇನೆ. ಇಂದಿನಿಂದಲೇ ರಾಜ್ಯದಲ್ಲಿ ಮಹಾಮಾರಿ ಕೊರೋನೊ ವೈರಸ್ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ‌ ಮೋದಿ ಅವರು ಲಾಕ್ ಡೌನ್ ವಿಸ್ತರಣೆ ಮಾಡಿರುವುದು ಸ್ವಾಗತಾರ್ಹ. ಮನೆಯಿಂದ ಯಾರೂ ಹೊರಗಡೆ ಬರಬಾರದು ಅಗತ್ಯ ವಸ್ತುಗಳನ್ನು ಈಗಾಗಲೇ ರಾಜ್ಯ ಸರಕಾರದ ಸೂಚನೆಯ ಮೇರೆಗೆ ಜಿಲ್ಲಾಡಳಿತದ‌ ಮೂಲಕ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುತ್ತಿದೆ. ಅನಗತ್ಯವಾಗಿ ಮನೆಯಿಂದ ಹೊರ ಬರುವವರ ಮೇಲೆ ಈಹಾಗಲೇ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಲಾಕ್ ಡೌನ್ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಏ.20ರ ವರೆಗೆ ರಾಜ್ಯದಲ್ಲಿ ಕೊರೋನೊ ವೈರಸ್ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಜನರು ಸಹಕರಿಸಬೇಕು. ಲಾಕ್ ಡೌನ್ ಸಡಿಲಿಕೆಯ ಬಗ್ಗೆ ಕೇಂದ್ರ ಸರಕಾರದಿಂದ ಮಾರ್ಗಸೂಚಿಗಳು ಬರಬೇಕಿದೆ. ಅದನ್ನು ನೋಡಿಕೊಂಡು ರಾಜ್ಯ ಸರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

Share
WhatsApp
Follow by Email