ಬ್ರೇಕಿಂಗ್ ನ್ಯೂಸ್ ಮಾಜಿ ಸಚಿವ ಪಿ ಎಂ ನರೇಂದ್ರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಜನತೆಗೆ ಆಹಾರ ಕಿಟ್ ವಿತರಣೆ 14/04/202014/04/2020 admin ಮಳವಳ್ಳಿ : ಮಾಜಿ ಸಚಿವ ಹಾಗೂ ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಪಿಎಂ ನರೇಂದ್ರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ಟಾಸ್ಕ್ ಫೋರ್ಸ್ ಕಮಿಟಿ ವತಿಯಿಂದ ಮಳವಳ್ಳಿ ಪಟ್ಟಣದ ಬಡಜನತೆಗೆ ಆಹಾರಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮ ಜರುಗಿತು ಇಂದು ಬೆಳಗ್ಗೆ ಪಟ್ಟಣದ ಟಿಎಪಿಸಿಎಂಎಸ್ ರೈತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಚಿದಂಬರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಪ್ರತಿ ಜಿಲ್ಲಾ ಹಾಗೂ ತಾಲೂಕು ವಿಭಾಗದಲ್ಲಿ ಕಾಂಗ್ರೆಸ್ ವತಿಯಿಂದ ಟಾಸ್ಕ್ ಫೋರ್ಸ್ ಅನ್ನು ರಚನೆ ಮಾಡಿ ಆ ಮೂಲಕ ಲಾಕ್ಡೌನ್ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾಗಿರುವ ಜನರಿಗೆ ಆಹಾರ ಪದಾರ್ಥಗಳ ವಿತರಣೆಯ ಜೊತೆಗೆ ನೊಂದ ಜನರಿಗೆ ಸಹಾಯ ಹಸ್ತ ಚಾಚುವಂತೆ ಸಲಹೆ ನೀಡಿದ್ದು ಅದರಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಟಾಸ್ಕ್ ಪೋರ್ಸ್ ವತಿಯಿಂದ ಆಹಾರ ಪದಾರ್ಥಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು ಮಳವಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ಮಾಜಿ ತಾಪಂ ಅಧ್ಯಕ್ಷ ನಾಗೇಶ್ ಮಾತನಾಡಿ ಇಂದು ಮಾಜಿ ಸಚಿವ ಪಿಎಂ ನರೇಂದ್ರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಇದೇ ದಿನ ಬಡಜನತೆಗೆ ಆಹಾರ ಪದಾರ್ಥಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಗಂಗಾಧರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜ್ ಸುಂದರ್ ರಾಜ್ ತಾಪಂ ಅಧ್ಯಕ್ಷರಾದ ಸುಂದರೇಶ್ ಉಪಾಧ್ಯಕ್ಷರಾದ ಸಿ ಮಾಧು ಮತ್ತಿತರರು ಹಾಜರಿದ್ದರುವರದಿ :ಕೃಪ ಸಾಗರ್ ಗೌಡಮಂಡ್ಯ Share