ಬ್ರೇಕಿಂಗ್ ನ್ಯೂಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಊಟ ಸಿಗದೇ ಬಳಲುತ್ತಿರುವ ನಿರ್ಗತಿಕರಿಗೆ ಊಟ ಯೋಚನೆ ಮಾಡಿ ಮಾನವೀಯತೆ ಮೆರೆದಿದ್ದಾರೆ 14/04/202014/04/2020 admin ಲಾಕ್ ಡೌನ್ ಹಿನ್ನೆಲೆಯಲ್ಲಿ ಊಟ ಸಿಗದೇ ಬಳಲುತ್ತಿರುವ ನಿರ್ಗತಿಕರಿಗೆ, ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ್.ಜಿ.ಕೋಳುರ ಮಾನವೀಯತೆ ಮೆರೆದಿದ್ದಾರೆ. ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾದಿಂದ ಜನರು ಪರದಾಡುತ್ತಿದ್ದಾರೆ. ಈ ನಡುವೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಗತಿಕರಿಗೆ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ್. ಜಿ.ಕೋಳುರ ಊಟದ ವ್ಯವಸ್ಥೆ ಮಾಡಿದ್ದಾರೆ. ಲಾಕ್ ಡೌನ್ ಆರಂಭ ದಿನದಿಂದ ಮುಗಿಯುವವರೆಗೂ ಎಲ್ಲಾ ಕಾರ್ಯಕರ್ತರೊಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ದಿನನಿತ್ಯ ಸುಮಾರು 500ಕ್ಕೂ ಹೆಚ್ಚು ಜನರಿಗೆ ಊಟವನ್ನು ವಿತರಣೆ ಮಾಡಲಾಗುತ್ತಿದೆ. ಅಲ್ಲದೇ ಕೊರೊನಾ ಭೀತಿ ಹಿನ್ನೆಲೆ ಜಾಗೃತಿ ಮೂಡಿಸುವ ಸಲುವಾಗಿ ಕೋವಿಡ್ 19 ವಾರ್ ರೂಮ್ ಓಪನ್ ಮಾಡಿ, ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ. Share