
ಇಂದು ಪತ್ತೆಯಾದ 17 ಪ್ರಕರಣಗಳಲ್ಲಿ 15 ಪುರುಷರು ಮತ್ತು 2 ಮಹಿಳೆಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
10 ಪ್ರಕರಣಗಳು ಮೈಸೂರಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ 9 ಮಂದಿ ನಂಜನಗೂಡಿನವರೆಂದು ತಿಳಿದಿದೆ.
ಉಳಿದಂತೆ ಬೆಂಗಳೂರು 2, ಬಾಗಲಕೋಟೆ 2, ವಿಜಯಪುರದಲ್ಲಿ 2 ಪ್ರಕರಣ ಪತ್ತೆಯಾಗಿದ್ದು, ಕಲಬುರಗಿಯಲ್ಲಿ 1 ಕೊರೋನಾ ಪ್ರಕರಣ ವರದಿಯಾಗಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದ್ದು, 75 ಮಂದಿ ಗುಣಮುಖರಗಿದ್ದಾರೆ.