ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ವೈರಸ್ ತೀವ್ರ ಆತಂಕ ತಂದೊಡ್ಡಿದೆ. ಕರ್ನಾಟಕದಲ್ಲಿ ಒಂದೇ ದಿನ 34 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಹೆಚ್ಚು ಭೀತಿ ಎದುರಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ನಿನ್ನೆಯಿಂದ ಇಂದು ಬೆಳಗ್ಗೆಯವರೆಗೆ 34 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ 34 ಸೋಂಕಿತರ ಪೈಕಿ 15 ಮಂದಿ ಮಹಿಳೆಯರೇ ಆಗಿದ್ದಾರೆ. ಇನ್ನು ಬೆಳಗಾವಿಯಲ್ಲಿ ಒಂದೇ ದಿನ 17 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ನಾಗರೀಕರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟಾರೆ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದ್ದು, 13 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.
ಇನ್ನು ಮೈಸೂರಿನಲ್ಲಿ 3, ಬೆಂಗಳೂರಿನಲ್ಲಿ 4, ವಿಜಯಪುರ-7, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಮಾರಕ ಸೋಂಕು ದೃಢಪಟ್ಟಿದೆ