ಪೋಲಿಸ್ ಇಲಾಖೆಯ ಹದ್ದಿನ ಕಣ್ಣು : ಮೂಡಲಗಿಯಲ್ಲಿ ಜನಸಂದಣಿ ನಿಯಂತ್ರಿಸಲು ಡ್ರೋಣ ಕ್ಯಾಮರಾದಿಂದ ನಿಗಾ

ಮೂಡಲಗಿ : ಪಟ್ಟಣದಲ್ಲಿ ಕೆಲವರು ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮನೆಯಿಂದ ವಿನಾಕಾರಣ ಹೊರಗೆ ಬಂದು ಅನ್ಯರ ಜೀವದೊಂದಿಗೆ ಚೆಲ್ಲಾಟ ನಡೆಸಿದ್ದು, ಪೋಲಿಸರು ಮತ್ತು ಪುರಸಭೆಯವರು ಸಾಕಷ್ಟೂ ಮುಂಜಾಗೃತ ಕ್ರಮ ಕೈಗೊಂಡಿದ್ದರು ಜನರು ಹೊರಗೆ ಬರುತ್ತಿರುವದರಿಂದ ಮೂಡಲಗಿ ಪಟ್ಟಣದಲ್ಲಿ ಇಂದು ಮನೆಯಿಂದ ಹೊರಗೆ ಬರುವವರ ಮೇಲೆ ನಿಗಾವಹಿಸಲು ಮೂಡಲಗಿ ಪೋಲಿಸರು ಡ್ರೋಣ ಕ್ಯಾಮರಾ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗವಿ ಜಿಲ್ಲೆಯಲ್ಲಿ ಹೆಚ್ಚಾಗಿ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಪೋಲಿಸ್ ಬಂದೋಬಸ್ತ್ ಇನ್ನಷ್ಟು ಕಠಿಣವಾಗಿ ಜಾರಿ ಮಾಡಲಾಗಿದ್ದು, ಪೋಲಿಸರ ಕಣ್ಣು ತಪ್ಪಿಸಿ ಹೊರಗಡೆ ತಿರುಗಾಡುವವರ ಮೇಲೆ ನಿಗಾ ಇಡಲು ಡ್ರೋಣ ಕ್ಯಾಮರಾ ಬಳಸಲಾಗುತ್ತಿದೆ. ಕ್ಯಾಮರಾದಲ್ಲಿ ಸೆರೆ ಸಿಕ್ಕವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ವೆಂಕಟೇಶ ಮೂರನಾಳ ಹಾಗೂ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ತಿಳಿಸಿದ್ದಾರೆ.
ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಪಟ್ಟಣ ಹಾಗೂ ಗ್ರಾಮದಲ್ಲಿ ಜನರು ಹೊರಗೆ ಬಾರದಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮೈಕ್ ಮೂಲಕ ಎಚ್ಚರಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ಸಿಬ್ಬಂಧಿಗಳ ಸಹಕಾರದೊಂದಿಗೆ ಮೂಡಲಗಿ ತಾಲೂಕಿನ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕಟ್ಟುನಿಟ್ಟಿ ಕ್ರಮಕೈಗೊಳ್ಳಲಾಗಿದೆ.
ಈ ಸದಂರ್ಭದಲ್ಲಿ ಮೂಡಲಗಿ ತಾಲೂಕಾ ದಂಡಾಧಿಕಾರಿ ಡಿ ಜೆ ಮಹಾತ್, ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮೂಡಲಗಿ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರದಿ, ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಹಾಗೂ ಮುಂತಾದವರು ಉಪಸ್ಥಿತರಿದ್ದರು
Share
WhatsApp
Follow by Email