ಕಂಕಣವಾಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ಕಂಕಣವಾಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ರಾಯಬಾಗ : ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.


ಕಂಕಣವಾಡಿ ಗ್ರಾಮದ ಮರ್ದಿ ತೋಟದ ಬಾವಿಯಲ್ಲಿ ಸಿದ್ದಪ್ಪ ಯಮನಪ್ಪಾ ಗದಾಡಿ (25) ಯುವಕನ ಶವ ಪತ್ತೆಯಾಗಿದ್ದು, ಮೃತ ಸಿದ್ದಾಪ್ಪ ಗೋಕಾಕ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನಿವಾಸಿ. ಸ್ಥಳಕ್ಕೆ ರಾಯಬಾಗ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.
Share
WhatsApp
Follow by Email