ರಾಜ್ಯದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದೆ. ಏತನ್ಮಧ್ಯೆ, ಇಂದು ಕೊರೊನಾ ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ. ಸದ್ಯ ಕಿಲ್ಲರ್ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಮಾರಕ ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕು ಪೀಡಿತ 281ನೇ ರೋಗಿ ಬೆಂಗಳೂರಿನ ಹಳೇಗುಡ್ಡದ ನಿವಾಸಿಯಾಗಿದ್ದು, 65 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ರಕ್ತದ ಸ್ಯಾಂಪಲ್ ಹಾಗೂ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ತಪಾಸಣೆ ನಡೆಸಿದ್ದು, ಈ ವೇಳೆ, ಆಕೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತು. ಇಂದು ವೃದ್ಧೆ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದ್ದು, ಜನತೆಯಲ್ಲಿ ಮತ್ತಷ್ಟು ಭೀತಿ ಸೃಷ್ಟಿಸಿದೆ
Share
WhatsApp
Follow by Email