ನಾಳೆಯಿಂದ ನೌಕರರು ಕಚೇರಿಗೆ ಹಾಜರು: ಸೂಚನೆ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನಾಳೆಯಿಂದ ಶೇಕಡ 33ರಷ್ಟು ಸಿಬ್ಬಂದಿ ಕೆಲಸ ಆರಂಭಿಸಲಿದ್ದಾರೆ. ಕೊರೋನಾ ಸೇವೆಯಲ್ಲಿ ತೊಡಗಿಸಿಕೊಂಡಿರುವ 18 ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಏಪ್ರಿಲ್ 20 ರಿಂದ ಮೇ 3ರವರೆಗೆ ಸುತ್ತೋಲೆ ಜಾರಿಯಲ್ಲಿರುತ್ತದೆ. ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಶೇಕಡ 33 ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ವೈದ್ಯಕೀಯ ಶಿಕ್ಷಣ, ಆರೋಗ್ಯ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ, ಸಾರಿಗೆ, ವಾರ್ತಾ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಮೀನುಗಾರಿಕೆ, ಅರಣ್ಯ, ಕೃಷಿ ಉತ್ಪನ್ನ ಮಾರುಕಟ್ಟೆ, ಕಾರ್ಮಿಕ, ಕೃಷಿ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸಕ್ಕೆ ಹಾಜರಾಗಲಿದ್ದಾರೆ.
Share
WhatsApp
Follow by Email