ಬ್ರೇಕಿಂಗ್ ನ್ಯೂಸ್ ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸುತಿದ್ದ ಸಾರಾಯಿ ಪೌಚ್‌ಗಳನ್ನು ಹಾಗೂ ಒಂದು ಬೈಕ್ ಅಬಕಾರಿ ಇಲಾಖೆಯ ಸಿಬ್ಬಂದಿಗಳು ವಶಕ್ಕೆ 19/04/202019/04/2020 admin ಜಮಖಂಡಿ: ತಾಲೂಕಿನ ಹುನ್ನೂರ ಗ್ರಾಮದಲ್ಲಿ ಅಕ್ರಮವಾಗಿ ಸಾರಾಯಿ ಸಾಗಾಟ ಮಾಡುತಿದ್ದ ಸಂದರ್ಭದಲ್ಲಿ ಅಬಕಾರಿ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.ಬೈಕ್‌ನಲ್ಲಿ ಅಂದಾಜು 7.2 ಲೀಟರ್‌ನಷ್ಟು ಸಾರಾಯಿಯನ್ನು ಸಾಗಿಸುತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ ದಾಳಿ ನಡೆಯುತಿದ್ದಂತೆ ಬೈಕ್‌ಸವಾರ ಬೈಕ್ ಹಾಗೂ ಸಾರಾಯಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.ಬೈಕ್ ಹಾಗೂ ಸಾರಾಯಿಯನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.ಕಳ್ಳಬಟ್ಟಿ ವಶಕ್ಕೆ:ತಾಲೂಕಿನ ಹಿರೇಪಡಸಲಗಿ ಗ್ರಾಮಲ್ಲಿ ಅಕ್ರವಾಗಿ ಕಳ್ಳಬಟ್ಟಿಯನ್ನು ಸಾಗಿಸುತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ಅಬಕಾರಿ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ 5.5 ಲೀಟರ್ ಕಳ್ಳಬಟ್ಟಿ ಹಾಗೂ ಒಂದು ಬೈಕ್‌ನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ. Share