ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ 2021ರ ವರೆಗೂ ತಡೆ

ನವದೆಹಲಿ: ಹೆಚ್ಚಿಸಲಾಗಿದ್ದ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಪಾವತಿ ತಡೆ ಹಿಡಿಯಲು ನಿರ್ಧರಿಸಿರುವುದಾಗಿ ಸರ್ಕಾರ ಗುರುವಾರ ಘೋಷಿಸಿದೆ. ಕೋವಿಡ್‌-19ನಿಂದ ಎದುರಾಗಿರುವ ಬಿಕ್ಕಟ್ಟಿನಿಂದ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ನೀಡಲು ಉದ್ದೇಶಿಸಲಾಗಿದ್ದ ಹೆಚ್ಚುವರಿ ತುಟ್ಟಿಭತ್ಯೆ (ಡಿಎ ಮತ್ತು ಡಿಆರ್‌) ಪಾವತಿಯನ್ನು 2021ರ ಜುಲೈ ವರೆಗೂ ತಡೆಹಿಡಿಯಲಾಗಿದೆ.

ಇದೇ ವರ್ಷ ಜನವರಿಯಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಿ ಸರ್ಕಾರ ಆದೇಶಿಸಿತ್ತು. ಅದನ್ನು ಈಗ ಹಿಂಪಡೆದಿರುವುದಾಗಿ ಸರ್ಕಾರ ಹೇಳಿದೆ. ಪ್ರಸ್ತುತ ದರದಲ್ಲೇ ಡಿಎ ಮತ್ತು ಡಿಆರ್‌ ಮುಂದುವರಿಯಲಿದೆ.
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಲೆ ಏರಿಕೆ ಸರಿದೂಗಿಸುವ ನಿಟ್ಟಿನಲ್ಲಿ ಸರ್ಕಾರ ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಪರಿಷ್ಕರಿಸಲಾಗುತ್ತದೆ.
ಪ್ರಸ್ತುತ ಕೈಗೊಳ್ಳಲಾಗಿರುವ ನಿರ್ಧಾರವು ಕೇಂದ್ರ ಸರ್ಕಾರದ 49.26 ಲಕ್ಷ ನೌಕರರು ಹಾಗೂ 61.17 ಲಕ್ಷ ಪಿಂಚಣಿದಾರರ ಮೇಲೆ ಪರಿಣಾಮ ಬೀರಲಿದೆ.
Share
WhatsApp
Follow by Email