BIG BREAKING : ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 18ಕ್ಕೆ ಏರಿಕೆ

ದಕ್ಷಿಣ ಕನ್ನಡ : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾಗೆ ಮತ್ತೊಂದು ಬಲಿಯನ್ನು ಪಡೆಯುವ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡದಲ್ಲಿ ಕೊರೋನಾಗೆ 2ನೇ ಬಲಿ ಪಡೆದಿದೆ. ಕೊರೋನಾ ವೈರಸ್ ಗೆ ಅತ್ತೆ, ಸೊಸೆ ಬಲಿಯಾಗಿದ್ದಾರೆ. ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಏ.18ಕ್ಕೆ ಸೊಸೆ ಕೊರೋನಾದಿಂದ ಬಲಿಯಾಗಿದ್ದರೇ, ಏ.23ರ ಇಂದು ಕೊರೋನಾ ಸೋಂಕಿನಿಂದಾಗಿ ಅತ್ತೆ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ.
ಅಂದಹಾಗೇ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಸಬಾ ಪೇಟೆಯ ಅತ್ತೆ ಸೊಸೆ ಆಗಿದ್ದರು.
ಇಂದು ಕೊರೋನಾ ವೈರಸ್ ನಿಂದಾಗಿ ಸಾವನ್ನಪ್ಪಿರು ಮಹಿಳೆ, ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಕೊವೀಡ್ ಆಸ್ಪತ್ರೆ ಯ ತೀವ್ರನಿಗಾ ಘಟಕದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಒಟ್ಟಾರೆಯಾಗಿ ಇಂದು ಹೊಸದಾಗಿ 18 ಜನರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆಗಿ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನಿಂದ ಒರ್ವ ಮಹಿಳೆ ಸಾವನ್ನಪ್ಪುವ ಮೂಲಕ, 18ಕ್ಕೆ ರಾಜ್ಯದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ.
Share
WhatsApp
Follow by Email